Publish Date: Mon, 21 Nov 2022 (08:00 IST)
Updated Date: Mon, 21 Nov 2022 (09:02 IST)
ಬಳ್ಳಾರಿ : ಸಚಿವ ಶ್ರೀರಾಮುಲುರನ್ನು ಪೆದ್ದ ಎಂದು ಟೀಕಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ರು.
ಶ್ರೀರಾಮುಲು ಮುಂದೊಂದು ದಿನ ಸಿಎಂ ಆಗೋ ಕಾಲ ಬರುತ್ತೆ ಎಂದು ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ ಮುಖ್ಯಮಂತ್ರಿಯನ್ನು ಸನ್ಮಾನಿಸುವ ನೆಪದಲ್ಲಿ ಬಳ್ಳಾರಿಯಲ್ಲಿ ಎಸ್ಟಿ ವಿರಾಟ್ ಸಮಾವೇಶ ನಡೆಸುವ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸಮ್ಮುಖದಲ್ಲಿ ರಾಜ್ಯ ಬಿಜೆಪಿ ಚುನಾವಣಾ ರಣಕಹಳೆ ಮೊಳಗಿಸಿದೆ.