ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವುದನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೂಡಲೇ ನಿಲ್ಲಿಸಬೇಕೆಂದು ಆದೇಶ ನೀಡಿದ್ದಾರೆ.
ಚಿಕ್ಕಮಕ್ಕಳಿಗೆ ಆನ್ ಲೈನ್ ಶಿಕ್ಷಣ ಮಾನಸಿಕ ಒತ್ತಡ ಹೇರುತ್ತದೆ. ಇದರಿಂದ ಆರೋಗ್ಯಕ್ಕೂ ಒಳ್ಳೆಯದಲ್ಲ ಎಂದು ಹಲವು ತಜ್ಞರೇ ವರದಿ ನೀಡಿದ್ದರು. ಪೋಷಕರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.
ಈ ಹಿನ್ನಲೆಯಲ್ಲಿ ಸುರೇಶ್ ಕುಮಾರ್ ಇಂದಿನಿಂದಲೇ 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ರದ್ದುಗೊಳಿಸಿ ಆದೇಶ ನೀಡಿದ್ದಾರೆ.