ಬೆಂಗಳೂರು : ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಬಂದ ಬಳಿಕ ಬಳ್ಳಾರಿ ರಾಜಕೀಯದಲ್ಲಿ ಸಂಚಲನ ಉಂಟಾಗಿದೆ.
ಹನ್ನೊಂದು ವರ್ಷಗಳ ಬಳಿಕ ಬಳ್ಳಾರಿಗೆ ಕಾಲಿಟ್ಟಿರುವ ರೆಡ್ಡಿ ಸುಮ್ಮನೇ ಕುಳಿತಿಲ್ಲ. ಹೌದು ಗಾಲಿ ಜನಾರ್ದನ ರೆಡ್ಡಿ ಮತ್ತೆ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.
ಪಾಲಿಕೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ ಪಾಲಿಕೆ ತನ್ನ ತೆಕ್ಕೆಗೆ ಹಾಕಿಕೊಳ್ಳಲು ಆಪರೇಷನ್ ಕಮಲ ಮುಂದಾಗಿದೆ ಎನ್ನುವ ಗಂಭೀರ ಆರೋಪವನ್ನು ಕಾಂಗ್ರೆಸ್ ಮುಖಂಡರು ಮಾಡಿದ್ದಾರೆ.
ಬಳ್ಳಾರಿಗೆ ಬಂದ ಬಳಿಕ ಮತ್ತೆ ಆಪರೇಷನ್ ಕಮಲ ಸದ್ದು ಮಾಡುತ್ತಿದ್ದೆ. ಹಿಗಂತ ಗಣಿ ನಾಡು ಬಳ್ಳಾರಿ ಕಾಂಗ್ರೆಸ್ ಮುಖಂಡರು ಗಂಭೀರ ಆರೋಪ ಮಾಡುತ್ತಿದ್ದಾರೆ. ಮಹಾನಗರ ಪಾಲಿಕೆಯ ಚುನಾವಣೆ ನಡೆದು 9 ತಿಂಗಳು ಕಳೆದಿದೆ. ಹಿಂಬಾಗಿಲಿನಿಂದ ಬಿಜೆಪಿ ಅಧಿಕಾರ ಹಿಡಿಯಲು ಮುಂದಾಗಿದ್ದು, ಪಾಲಿಕೆ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಕಂಡಿದೆ.
ಇದು ಇಲ್ಲಿನ ಸಚಿವ ಶ್ರೀರಾಮುಲು ಹಾಗೂ ಸೋಮಶೇಖರ್ ಹೀಗಾಗಿ ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಮುಖಾಂತರ ಆಪರೇಷನ್ ಕಮಲ ಮಾಡುತ್ತಿದ್ದಾರೆ. ಪಾಲಿಕೆಯ ಒಬ್ಬ ಸದಸ್ಯರಿಗೆ ಒಂದು ಕೋಟಿ ಆಮಿಷ ಒಡಿದ್ದಾರೆ.
ಒಂದು ಕಾರು, ಒಂದು ಸೈಟ್ ಕೊಡುವುದಾಗಿ ಆಮಿಷ ಒಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬಳ್ಳಾರಿ ಗ್ರಾಮೀಣ ಶಾಸಕ ನಾಗೇಂದ್ರ ಹಾಗೂ ರಾಜ್ಯಸಭಾ ಸದಸ್ಯ ಜೆಂಟಿ ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ಮುಖಂಡರ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.