Publish Date: Thu, 21 Sep 2023 (15:00 IST)
Updated Date: Thu, 21 Sep 2023 (15:04 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ಆದೇಶಿಸಿದೆ. ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ B.R.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ. ತಮಿಳುನಾಡು ಪರ ವಕೀಲರಾದ ಮುಕುಲ್ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್ ದಿವಾನ್ ತಮ್ಮ-ತಮ್ಮ ವಾದವನ್ನು ಮಂಡಿಸಿದ್ರು. ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದ್ರು.. ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್ ದಿವಾನ್, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು. ವಾದ-ವಿವಾದಗಳನ್ನು ಆಲಿಸಿದ ಬಳಿಕ B.R.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು. ಈ ಮೂಲಕ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ನಲ್ಲೂ ಹಿನ್ನೆಡೆಯಾಗಿದೆ.