Publish Date: Fri, 11 Aug 2023 (18:30 IST)
Updated Date: Fri, 11 Aug 2023 (19:06 IST)
40% ಆರೋಪ ಕಾಂಗ್ರೆಸ್ ರಾಜಕೀಯ ಲಾಭ ವಿಚಾರಕ್ಕೆ ಸಂಬಂಧಿಸಿದಂತೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಾವು ಕೆಲವು ಕಡೆ ಕೆಲಸ ಆರಂಭಿಸಿದ್ದೇವೆ.. ಅದಕ್ಕೆ ಸುದ್ದಿಗೋಷ್ಟಿ ಮಾಡ್ತಿದ್ದೇವೆ. ನಮ್ಮ ಪರಿಸ್ಥಿತಿ ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ.. ಈ ಸರ್ಕಾರ ಮಾತ್ರವಲ್ಲ, ಹಿಂದಿನ ಸರ್ಕಾರದಿಂದಲೂ ಬೆಂಕಿಯಿಂದ ಬಾಣಲೆಗೆ ಬಿದ್ದಿದ್ದೇವೆ.. ಈಗಲೂ ನಮ್ಮ ಹಣಕ್ಕೆ ಅವರ ಬಳಿ ಗೋಗರೆಯುವ ಪರಿಸ್ಥಿತಿ ಬಂದಿದೆ. 31ರೊಳಗೆ ಸರ್ಕಾರ ಹಣ ಬಿಡುಗಡೆ ಮಾಡುವಂತೆ ಸಿಎಂಗೆ ಪತ್ರ ಬರೆದಿದ್ದೇವೆ. ಆತ್ಮಹತ್ಯೆ ಮಾತ್ರ ದಾರಿ ಅನ್ನೋ ಪರಿಸ್ಥಿತಿ ಬಂದಿದೆ.. ಸಿಎಂಗೆ ನಿನ್ನೆ ಕೂಡ ಪತ್ರ ಬರೆದಿದ್ದೇನೆ. ಸ್ಟೇಟ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿ ಸಭೆ ಇದೆ. ಎಲ್ಲರನ್ನೂ ಕರೆದು ಸಭೆ ಮಾಡಿ ಮುಂದಿನ ತೀರ್ಮಾನ ತೆಗೆದುಕೊಳ್ತೀವಿ ಎಂದಿದ್ದಾರೆ