Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ರಾಷ್ಟ್ರಪತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸೋಲಬಹುದು: ಪರಮೇಶ್ವರ್

ರಾಷ್ಟ್ರಪತಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಸೋಲಬಹುದು: ಪರಮೇಶ್ವರ್
ಬೆಂಗಳೂರು , ಸೋಮವಾರ, 17 ಜುಲೈ 2017 (20:43 IST)
ರಾಷ್ಟ್ರಪತಿ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟದ ಅಭ್ಯರ್ಥಿ ಮೀರಾಕುಮಾರ್ ಸೋಲಬಹುದು. ಆದರೆ, ಸೈದ್ದಾಂತಿಕವಾಗಿ ಗೆಲುವು ಸಾಧಿಸುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಇಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ರಾಮಾನಾಥ್ ಕೋವಿಂದ್ ಮತಗಳ ಅಂತರದಲ್ಲಿ ಗೆಲುವು ಸಾಧಿಸಬಹುದು. ಆದರೆ, ನಾವು ಸೈದ್ದಾಂತಿಕವಾಗಿ ನಾವು ಗೆಲುವು ಸಾಧಿಸುತ್ತೇವೆ ಎಂದರು.
 
ಬಿಹಾರ್ ರಾಜ್ಯದ ಮಾಜಿ ರಾಜ್ಯಪಾಲರಾದ ರಾಮಾನಾಥ್ ಕೋವಿಂದ್, ಎನ್‌ಡಿಎ ಮೈತ್ರಿಕೂಟದಿಂದ ಸ್ಪರ್ಧಿಸಿರುವುದರಿಂದ ಗೆಲುವು ಬಹುತೇಕ ಖಚಿತವಾಗಿದೆ ಎಂದು ಮೂಲಗಳು ತಿಳಿಸಿವೆ.
 
ರಾಷ್ಟ್ರಪತಿ ಚುನಾವಣೆಗಾಗಿ ವಿಧಾನಸೌಧದಲ್ಲಿ ನಡೆದ ಮತದಾನದಲ್ಲಿ 224 ಸದಸ್ಯ ಬಲದಲ್ಲಿ 222 ಮತಗಳ ಚಲಾವಣೆಯಾದವು. ಜೆಡಿಎಸ್ ಮುಖಂಡ ವೈ.ಎಸ್.ವಿ.ದತ್ತಾ ಮತ್ತು ಅಮೆರಿಕ ಪ್ರವಾಸದಲ್ಲಿರುವ ಚಲುವರಾಯ ಸ್ವಾಮಿ ಮಾತ್ರ ಮತ ಚಲಾವಣೆ ಮಾಡಲಿಲ್ಲ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎನ್`ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಆಯ್ಕೆ