Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ದರಾಮಯ್ಯ

Chief Minister Siddaramaiah, Hasanambe Darshana, Karnataka Congress Government

Sampriya

ಹಾಸನ , ಮಂಗಳವಾರ, 29 ಅಕ್ಟೋಬರ್ 2024 (15:18 IST)
ಹಾಸನ: ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಈ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕೆಗಳನ್ನು ಮಾಡುತ್ತಲೇ ಇದೆ. ಆದರೆ ಜನರ ಮಾತ್ರ ಖುಷಿಯಾಗಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 ಹಾಸನಾಂಬ ದೇವಿಯ ದರ್ಶನ ಪಡೆದು ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.  ಗ್ಯಾರಂಟಿ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ, ರಾಜ್ಯ ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕಿಸಿದ್ದವು. ಆ ಎಲ್ಲ ಟೀಕೆಗಳನ್ನು ಮೆಟ್ಟಿ ನಿಂತು, ಗ್ಯಾರಂಟಿಗಳನ್ನು ಜಾರಿ ಮಾಡಿ, ಬಡವರಿಗೆ ಶಕ್ತಿ ತುಂಬಲಾಗಿದೆ. ಬಡವರು ಖುಷಿಯಾಗಿದ್ದು, ಸಮಾಧಾನದಿಂದ ಇದ್ದಾರೆ. ಆದರೆ ಬಿಜೆಪಿ ಹಾಗೂ ಜೆಡಿಎಸ್ ನವರಿಗೆ ಸಮಾಧಾನವಾದಂತಿಲ್ಲ. ನಮ್ಮ ಸರ್ಕಾರ ಬಡವರ ಪರವಾಗಿ, ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದು, ಸಾಮಾಜಿಕ ನ್ಯಾಯ ಹಾಗೂ ಬಡವರ ಪರವಾಗಿಲ್ಲದವರಿಗೆ ಇದರಿಂದ ಸಮಾಧಾನವಿಲ್ಲದಂತಾಗಿದೆ ಎಂದು ಹೇಳಿದರು.

ನಾನು ಎರಡನೇ ಬಾರಿಗೆ ಹಾಸನಾಂಬ ದೇವಿ, ಸಿದ್ದೇಶ್ವರಸ್ವಾಮಿ, ಗಣಪತಿ ದೇವರ ದರ್ಶನವನ್ನು ಪಡೆದು, ರಾಜ್ಯದ ಎಲ್ಲ ಜನತೆಗೆ ಸನ್ಮಂಗಳ ಉಂಟು ಮಾಡಲಿ ಎಂದು ಪ್ರಾರ್ಥಿಸಿದ್ದೇನೆ. ನಾವು ಮನುಜರಾಗಿ ಪರಸ್ಪರ ದ್ವೇಷ ಇರಬಾರದು. ಸಮಾಜದಲ್ಲಿ ದ್ವೇಷವನ್ನು ಬಿತ್ತುವಂತಹ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಶಾಸ್ತಿ ಮಾಡುವಂತೆ ದೇವರನ್ನು ಕೋರಿದ್ದೇನೆ. ಈ ಬಾರಿ ದಸರಾ ಉತ್ಸವದಂತೆ ಹಾಸನಾಂಬ ಜಾತ್ರೆಯನ್ನೂ ಅದ್ದೂರಿಯಾಗಿ ಆಯೋಜಿಸಲಾಗಿದೆ. ನಮ್ಮ ರಾಜ್ಯ ಸರ್ವಜನಾಂಗದ ಶಾಂತಿಯ ತೋಟವಾಗಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ವಕ್ಫ್ ಆತಂಕದಲ್ಲಿರುವ ರೈತರಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್