ವಿಜಯಪುರ : ಹುಳವಿರುವ ಆಹಾರ ಸೇವಿಸಿ 20ಕ್ಕೂ ಹೆಚ್ಚು ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ವಿಜಯಪುರ ನಗರದ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ನಡೆದಿದೆ.
ಆಹಾರದಲ್ಲಿ ಹುಳಗಳಿದ್ದ ಪರಿಣಾಮ ಹಾಸ್ಟೆಲ್ ನ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, 10ಕ್ಕೂ ಅಧಿಕ ವಿದ್ಯಾರ್ಥಿನಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ.
5ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ನಗರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, 15 ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.