ಮುಂದಿನ ಐದು ವರ್ಷಗಳ ಅವಧಿಯವರೆಗೂ ಖಾಸಗಿ ಶಾಲೆ ಆರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಶಿಕ್ಷಣ ಸಚಿವ ತನ್ವೀರ್ ಶೇಠ್ ಸ್ಪಷ್ಟಪಡಿಸಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರಿ ಶಾಲೆಗಳು ಶಿಕ್ಷಣದ ಗುಣ ಮಟ್ಟವನ್ನು ಹೆಚ್ಚಿಸುವ ಕೆಲಸ ಮಾಡುತ್ತಿವೆ. ಶಿಕ್ಷಣದ ಉನ್ನತೀಕರಣಕ್ಕೆ ರಾಜ್ಯ ಸರಕಾರ ಸಂಪೂರ್ಣ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಮುಂದಿನ ಐದು ವರ್ಷಗಳ ಅವಧಿವರೆಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಪ್ರಾರಂಭಿಸಲು ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ್ನಕೆ 5 ಕೋಟಿ ರೂಪಾಯಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಈ ಕುರಿತು ಶೀಘ್ರದಲ್ಲೇ ಕೇಂದ್ರ ಕಸಾಪ ಅಧ್ಯಕ್ಷರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಿಕ್ಷಣ ಸಚಿವ ತನ್ವೀರ್ ಶೇಠ್ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ