Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪಂಜಾಬ್ ಗಾಯಕ ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಮಾನಸ ಜಿಲ್ಲೆಯಲ್ಲಿ ನಡೆದಿದೆ.
ಪಂಜಾಬ್ ನ ಭಗವಾನ್ ಮನ್ ನೇತೃತ್ವದ ಆಮ್ ಆದ್ಮಿ ಸರಕಾರ 450ಕ್ಕೂ ಹೆಚ್ಚು ಗಣ್ಯರಿಗೆ ನೀಡಲಾಗಿದ್ದ ಭದ್ರತೆಯನ್ನು ವಾಪಸ್ ಪಡೆದ ಬೆನ್ನಲ್ಲೇ ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿಧು ಮೂಸೆವಾಲಾ ಮಾನಸ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ವಿರುದ್ಧ ಸೋಲುಂಡಿದ್ದರು.