Webdunia - Bharat's app for daily news and videos

Install App

ಪಂಚರತ್ನ ರಥಯಾತ್ರೆ ಪುನಾರಂಭ

Webdunia
ಮಂಗಳವಾರ, 17 ಜನವರಿ 2023 (20:02 IST)
ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ಇಂದು ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯುತ್ತಿದೆ. ಇಂದಿನಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ. ಕ್ರಮವಾಗಿ ಇಂಡಿ, ಸಿಂಧಗಿ, ದೇವರಹಿಪ್ಪರಗಿ, ನಾಗಠಾಣ, ಮುದ್ದೇಬಿಹಾಳ ಹಾಗೂ ಬಸವನ ಬಾಗೇವಾಡಿ - ಬಬಲೇಶ್ವರದಲ್ಲಿ ರಥಯಾತ್ರೆ ನಡೆಯಲಿದೆ. ಜನವರಿ 23ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ, ಜನವರಿ 24ರಿಂದ 29ರವರೆಗೆ ರಾಯಚೂರು ಜಿಲ್ಲೆಯ ಲಿಂಗಸಗೂರು, ದೇವದುರ್ಗ, ರಾಯಚೂರು ಗ್ರಾಮಾಂತರ, ರಾಯಚೂರು, ಮಾನ್ವಿ, ಸಿಂಧನೂರು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯುತ್ತದೆ. ಜನವರಿ 30 ರಂದು ಕೊಪ್ಪಳ ಜಿಲ್ಲೆಯ ಕನಕಗಿರಿ, ಕುಷ್ಟಗಿಯಲ್ಲಿ ರಥಯಾತ್ರೆ ನಡೆಯಲಿದೆ. ಜನವರಿ 31ರಂದು ಬಳ್ಳಾರಿ, ವಿಜಯನಗರ ಜಿಲ್ಲೆಗಳ ಸಂಡೂರು, ಹಗರಿಬೊಮ್ಮನಹಳ್ಳಿ ಕ್ಷೇತ್ರಗಳಲ್ಲಿ ರಥಯಾತ್ರೆ ಸಾಗುತ್ತದೆ. ಫೆಬ್ರವರಿ 1ರಂದು ದಾವಣಗೆರೆ ಕ್ಷೇತ್ರದ ಹರಿಹರ ಕ್ಷೇತ್ರದಲ್ಲಿ ಹಾಗೂ ಫೆಬ್ರವರಿ 2-3ರಂದು ಹಾವೇರಿ ಜಿಲ್ಲೆಯ ರಾಣೆಬೆನ್ನೂರು, ಹಿರೇಕೆರೂರು ಕ್ಷೇತ್ರಗಳಲ್ಲಿ ರಥಯಾತ್ರೆ ನಡೆಯುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments