ಸಾರ್ವಜನಿಕ ಸೇವೆ ನೀಡುವ ಖಾಸಗಿ ವಾಹನಗಳು ಹಾಗೂ ರಾಷ್ಟ್ರೀಯ ರಹದಾರಿ ಹೊಂದಿರುವ ಸರಕು ಸಾಗಣೆ ವಾಹನಗಳಿಗೆ ಡಿ. 1ರಿಂದ ಜಿಪಿಎಸ್ ರೀತಿಯ ವೆಹಿಕಲ್ ಲೊಕೇಷನ್ ಟ್ರ್ಯಾಕಿಂಗ್ ಡಿವೈಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಕೆಗೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ, ಸರ್ಕಾರದ ಈ ಕ್ರಮಕ್ಕೆ ಖಾಸಗಿ ವಾಹನ ಮಾಲೀಕರು ಮಾತ್ರ ವಿರೋಧ ವ್ಯಕ್ತಪಡಿಸಿದ್ದಾರೆ.