ಬೆಂಗಳೂರು : ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ವ್ಯಕ್ತಿಯೊಬ್ಬರನ್ನು ಥಳಿಸಿ, ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ತಪಿಸ್ಥರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕೃತ್ಯ ಖಂಡಿಸಿ ಟ್ವೀಟ್ ಮಾಡಿರುವ ಸಿಎಂ ಕುಮಾರಸ್ವಾಮಿ, ಈ ಕೃತ್ಯ ಅತ್ಯಂತ ಅಮಾನವೀಯ. ಈ ಕುರಿತು ತನಿಖೆ ನಡೆಸಿ ತಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ತಿಳಿಸಿದ್ದೇನೆ. ಸಮಾಜದಲ್ಲಿ ಜಾತಿ ವೈಷಮ್ಯ ಇನ್ನೂ ಮುಂದುವರಿದಿರುವುದು ದುರದೃಷ್ಟಕರ. ಇಂಥ ಕೃತ್ಯಗಳನ್ನು ಒಕ್ಕೊರಲಿನಿಂದ ವಿರೋಧಿಸಬೇಕು ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆದೇಶದಂತೆ ಈಗಾಗಲೇ 6 ಜನರ ವಿರುದ್ಧ ಗುಂಡ್ಲು ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಾದ ಅರ್ಚಕ ಶಿವಪ್ಪ, ಮಹೇಶ್ ಎಂಬುವವರನ್ನು ಬಂಧಿಸಿದ್ದಾರೆ. ಬಸವರಾಜು, ಮಣಿಕಂಠ, ಸತೀಶ್, ಪುಟ್ಟಸ್ವಾಮಿ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.