ಪರಪ್ಪನ ಅಗ್ರಹಾರ ಜೈಲು ಜೈಲಾಗಿ ಉಳಿದಿಲ್ಲ ಅದೊಂದು ಬಾರ್ ಎನ್ನುವಂತಾಗಿದೆ ಎಂದು ಬಿಜೆಪಿ ಮುಖಂಡ ಮಾಜಿ ಡಿಸಿಎಂ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಸರಕಾರದ ಗೃಹ ಇಲಾಖೆ ಸಿದ್ದರಾಮಯ್ಯನವರ ರೀತಿಯಲ್ಲಿಯೇ ನಿದ್ದೆ ಮಾಡುತ್ತಿದೆ. ಶಶಿಕಲಾಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲು 2 ಕೋಟಿ ರೂಪಾಯಿ ಲಂಚ ಪಡೆಯಲಾಗಿದೆ ಎಂದು ಡಿಐಜಿ ರೂಪಾ ವರದಿ ಸಲ್ಲಿಸಿದ್ದಾರೆಯೇ ಹೊರತು ಆರೋಪ ಮಾಡಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಪರಪ್ಪನ ಅಗ್ರಹಾರ ಕಾರಾಗೃಹಜಲ್ಲಿ ಅಕ್ರಮ ಆರೋಪ್ ಕೇಸ್ ಪ್ರಕರಣವನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯ ನೇತೃತ್ವದಲ್ಲಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಪರಪ್ಪನ ಅಗ್ರಹಾರ ಜೈಲಿನ ಬಗ್ಗೆ ನಿಷ್ಪಕ್ಷಪಾತ ವರದಿ ಸಲ್ಲಿಸಿದ ಡಿಐಜಿ ರೂಪಾ ಅವರಿಗೆ ಸರಕಾರ ನೋಟಿಸ್ ನೀಡಿರುವುದು ಸರಿಯಲ್ಲ. ದಕ್ಷ ಅಧಿಕಾರಿಗೆ ನೋಟಿಸ್ ನೀಡುವುದು ಬಿಟ್ಟು ಅಕ್ರಮಗಳ ವಿರುದ್ಧ ಸರಕಾರ ಕ್ರಮಕೈಗೊಳ್ಳಲಿ ಎಂದು ಮಾಜಿ ಡಿಸಿಎಂ, ಆರ್.ಅಶೋಕ್ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.