ಕೊಪ್ಪಳ : ಸಿಎಂ ಸಚಿವ ಸಂಪುಟ ವಿಸ್ತರಣೆಗೆ ಸಿದ್ಧತೆ ನಡೆಸುತ್ತಿದ್ದ ಬೆನ್ನಲಾ ಇದೀಗ ಮತ್ತೆ ಬಿಜೆಪಿ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ಶುರು ಮಾಡಿದ್ದಾರೆ.
ಈ ಬಗ್ಗೆ ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಪರಣ್ಣ ಮುನವಳ್ಳಿ, ನಾನು ಪಕ್ಷದ ಶಿಸ್ತಿನ ಸಿಪಾಯಿ, ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಕಲ್ಯಾಣ ಕರ್ನಾಟಕ ಭಾಗಕ್ಕೆ 2 ರಿಂದ 3 ಸಚಿವ ಸ್ಥಾನ ಕೊಡಬೇಕು ಎಂದು ಹೇಳಿದ್ದಾರೆ.
ಸಚಿವ ಸ್ಥಾನ ಕೊಡಿ ಅಂತಾ ಕೇಳೋದ್ರಲ್ಲಿ ತಪ್ಪೇನಿಲ್ಲ. ಸಚಿವ ಸ್ಥಾನ ಕೊಡದಿದ್ರೂ ಬೇಜಾರಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಏನು ಹೇಳುತ್ತೆ ಅದನ್ನ ಕೇಳ್ತಿನಿ ಎಂದು ಅವರು ತಿಳಿಸಿದ್ದಾರೆ.