Publish Date: Wed, 15 Jul 2020 (14:29 IST)
Updated Date: Wed, 15 Jul 2020 (14:39 IST)
ಸಿಎಂ ತವರು ಜಿಲ್ಲೆಯಲ್ಲಿ ಮುಂದಿನ ಆದೇಶದವರೆಗೆ ಭಾಗಶಃ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಮಧ್ಯಾಹ್ನ 2ರವರೆಗೆ ಮಾತ್ರ ವ್ಯಾಪಾರ ವಹಿವಾಟು ಮಾಡಲು ಅವಕಾಶ ಇದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಾದ್ಯಂತ ಜುಲೈ 16ರಿಂದ ಮುಂದಿನ ಆದೇಶದವರೆಗೆ ಮಧ್ಯಾಹ್ನ 2ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಪೆಟ್ರೋಲ್ ಬಂಕ್‍ಗಳು, ಮದ್ಯದ ಅಂಗಡಿಗಳು, ಕಚೇರಿಗಳು ಸೇರಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಮಧ್ಯಾಹ್ನ 2ಗಂಟೆವರೆಗೆ ನಡೆಸಲು ಅವಕಾಶ ಕಲ್ಪಿಸಲಾಗಿದೆ.