ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ರಾಜ್ ಕುಮಾರ್ ಸಮಾಧಿ ಪಕ್ಕದಲ್ಲೇ ಪಾರ್ವತಮ್ಮನವರ ಅಂತ್ಯಕ್ರಿಯೆ ನೆರವೇರಿದೆ. ದಾಸಯ್ಯ ಸಂಪ್ರದಾಯದಂತೆ ಕಿರಿಯ ಪುತ್ರ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು. ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯ್ತು.
ರಾಜ್ ಕುಟುಂಬದ ಜೊತೆ ನಟ ಅಂಬರೀಷ್, ಸಾ.ರಾ. ಗೋವಿಂದು ಸೇರಿದಂತೆ ಚಿತ್ರೋದ್ಯಮದ ಹಲವು ಗಣ್ಯರು ಅಂತ್ಯಸಂಸ್ಕಾರದ ವೇಳೆ ಹಾಜರಿದ್ದರು. ಸರ್ಕಾರದ ಪರವಾಗಿ ಸಚಿವರಾದ ಡಿ.ಕೆ. ಶಿವಕುಮಾರ್ ಮತ್ತು ಕೆ.ಜೆ. ಜಾರ್ಜ್ ಹಾಜರಿದ್ದರು.
16 ದಿನಗಳಿಂದ ಬೆಂಗಳೂರಿನ ೆಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ವತಮ್ಮ ರಾಜಕುಮಾರ್ ಬೆಳಗಿನ ಜಾವ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮನವರ ಜೀವ ರಕ್ಷಣೆಗೆ ವೈದ್ಯರು ಶತಾಯಗತಾಯ ಪ್ರಯತ್ನ ನಡೆಸಿದರೂ ಫಲ ನೀಡಲಿಲ್ಲ. ಪಾರವತಮ್ಮ ಸಹ ಡಾ. ರಾಜಕುಮಾರ್ ರೀತಿಯೇ ಕಣ್ಣುಗಳನ್ನ ದಾನ ಮಾಡಿ ಆದರ್ಶರಾಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ