Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಟಾಲಿವುಡ್ ನಟ ಪವನ್ ಕಲ್ಯಾಣ್ ಅಭಿನಯದ ಭೀಮ್ಲಾ ನಾಯಕ್ ಸಿನಿಮಾ ಇತ್ತೀಚೆಗೆ ತೆರೆಕಂಡು ಉತ್ತಮ ರೆಸ್ಪಾನ್ಸ್ ಪಡೆದಿದೆ. ಪವನ್ ಕಲ್ಯಾಣ್ ಜೊತೆ ನಿತ್ಯಾ ಮೆನನ್ ನಾಯಕಿಯಾಗಿ ಕಮಾಲ್ ಮಾಡಿದ್ದಾರೆ. ಇನ್ನು ರಾಣಾ ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ. ಈಗ ಈ ಸಿನಿಮಾ ಒಟಿಟಿಯಲ್ಲೂ ಪ್ರಸಾರ ಕಂಡು ಮೆಚ್ಚುಗೆ ಪಡೆದುಕೊಂಡಿದೆ. ನಿನ್ನೆ ಪವನ್ ಕಲ್ಯಾಣ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಡಳಿತ ಮಂಡಳಿಯಿಂದ ಅವರಿಗೆ ವಿಶೇಷ ಸನ್ಮಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಪವನ್ ಕಲ್ಯಾಣ್ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಮುಗಿಬಿದ್ರು.