Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಗುತ್ತಿಗೆದಾರರಿಂದ 40 ಪರ್ಸೆಂಟ್ ಕಮಿಷನ್ ಪಡೆಯುವ ಆರೋಪ ಹೊತ್ತಿರುವ ಸರ್ಕಾರದ ವಿರುದ್ಧ ವ್ಯಾಪಕ ಟೀಕೆ ವ್ಯಕ್ತವಾಗುತ್ತಿದೆ.
ಭ್ರಷ್ಟಾಚಾರ ಆರೋಪ ಹೊತ್ತಿರುವ ಸರ್ಕಾರ ಅಣಕಿಸುವ ಪೋಸ್ಟರ್ನ್ನು ನಗರದ ಹಲವೆಡೆ ಅಂಟಿಸಲಾಗಿದೆ. ಪೇಟಿಎಂ ಮಾದರಿಯಲ್ಲೇ ಪೇ ಸಿಎಂ ಎಂಬ ಪೋಸ್ಟರ್ ವೈರಲ್ ಆಗಿದೆ.
ನಗರದ ಜಯಮಹಲ್ ರಸ್ತೆ, ಇಂಡಿಯನ್ ಎಕ್ಷ್ಪ್ರೆಸ್ ಬಳಿ ಗೋಡೆಗೆ ಪೇ ಸಿಎಂ ಎಂದು ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ ಪೋಸ್ಟರ್ ಅಂಟಿಸುವ ಮೂಲಕ ಭ್ರಷ್ಟ ಸರ್ಕಾರ ಎಂದು ಅಣಕಿಸಲಾಗಿದೆ. 40% accepted here ಎಂದು ಪೋಸ್ಟರ್ನಲ್ಲಿ ಒಕ್ಕಣೆ ಬರೆಯಲಾಗಿದೆ.
ಪೇಟಿಎಂ ಮಾದರಿಯಲ್ಲಿ ಪೇ ಸಿಎಂ ಎಂದು ಕ್ಯೂಆರ್ ಕೋಡ್ ಮೇಲೆ ಸಿಎಂ ಬಸವರಾಜ ಬೊಮ್ಮಾಯಿ ಫೋಟೋ ಹಾಕಲಾಗಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪದ ದೂರು ನೀಡಲು ಸಹಾಯವಾಣಿ ನಂಬರ್ ಹಾಕಿರುವ ಪೋಸ್ಟರ್ನ್ನು ಬೆಂಗಳೂರಿನ ಹಲವೆಡೆ ಅಂಟಿಸಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದ ಬಳಿಯೂ ಪೋಸ್ಟರ್ ಹಾಕಲಾಗಿದೆ.