Publish Date: Thu, 22 Feb 2018 (17:23 IST)
Updated Date: Thu, 22 Feb 2018 (17:24 IST)
ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್ ಗೂಂಡಾಗಳು ಹಲ್ಲೆಗೆ ನಡೆಸುತ್ತಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೋ ಇಲ್ಲವೋ ಎಂಬ ಶಂಕೆ ಮೂಡುತ್ತಿದೆ. ಕಾಂಗ್ರೆಸ್ ನಾಯಕರ ಗೂಂಡಾಗಿರಿ ರಾಜ್ಯದಲ್ಲಿ ಮುಂದುವರಿದಿದ್ದು ಭಯದ ವಾತಾವರಣ ನೆಲೆಗೊಂಡಿದೆ ಎಂದು ಆರೋಪಿಸಿದ್ದಾರೆ.
ಜನರಿಗೆ ಈ ಗೂಂಡಾ ಸರಕಾರದಿಂದ ಸಾಕಾಗಿದ್ದು, ಜನರು ರೋಸಿ ಹೋಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನರೇ ಕಾಂಗ್ರೆಸಿಗೆ ಬುದ್ಧಿಕಲಿಸಲಿದ್ದಾರೆ ಎಂದಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.