Publish Date: Thu, 11 Jan 2018 (14:21 IST)
Updated Date: Thu, 11 Jan 2018 (14:29 IST)
ಲಿಂಗಸೂಗೂರು ತಾಲೂಕಿನ ಗುರುಗುಂಟಾ ಸುಕ್ಷೇತ್ರ ಅಮರೇಶ್ವರ ದೇವಸ್ಥಾನದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಗಿಡಕ್ಕೆ ಕಟ್ಟಿ ಹಾಕಿ ಮನಬಂದಂತೆ ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಸಟಪ್ಪ ಎಂಬ ಯುವಕನೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಹೇಳಲಾಗಿದೆ. ದೇವಸ್ಥಾನದಲ್ಲಿ ರಾತ್ರಿ ವೇಳೆ ಮಹಿಳೆಯರ ಪಕ್ಕ ಹೋಗಿ ಮಲಗಿಕೊಳ್ಳುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಕೋಪಗೊಂಡ ಜನರು ಯುವಕನಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿದ್ದಾರೆ.
ಯುವಕನನ್ನು ಅರೆಬೆತ್ತಲೇ ಮಾಡಿದ ಜನರು ದೇವಸ್ಥಾನದ ಹತ್ತಿರ ಗಿಡಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.