ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡುವ ಮೂಲಕ ಹುಬ್ಬಳ್ಳಿ ಮಹಾನಗರಪಾಲಿಕೆ ಐತಿಹಾಸಿಕ ನಿರ್ಣಯ ಪ್ರಕಟಿಸಿದೆ.
ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೇಯರ್ ಈರೇಶ ಅವರು, ನಗರಪಾಲಿಕೆ ಸಮಿತಿಯ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಒಟ್ಟು 6 ಸಂಘಟನೆಗಳಿಂದ ಗಣೇಶೋತ್ಸವಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು, ಅನುಮತಿ ವಿರೋಧಿಸಿ 11 ಅರ್ಜಿಗಳು ಸಲ್ಲಿಕೆಯಾಗಿದ್ದವು. ಸರ್ವ ಪಕ್ಷಗಳು ಈ ಬಗ್ಗೆ ಸತತವಾಗಿ ಚರ್ಚಿಸಿ ಒಂದು ಅಂತಿಮ ನಿರ್ಣಯ ತೆಗೆದುಕೊಂಡಿದ್ದೆವೆ.
ಸರ್ವ ಪಕ್ಷಗಳ ಸಮಿತಿ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ವರದಿ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಮುಂದೆ ಪ್ರತಿ ವರ್ಷವೂ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುತ್ತದೆ.