ಮಂಗಳೂರು : ಎರಡು ತಿಂಗಳ ಬಳಿಕ ಇದೀಗ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.
ಚಾರ್ಮಾಡಿ ಘಾಟ್ ನಲ್ಲಿ ಎರಡು ತಿಂಗಳ ಹಿಂದೆ ಸುರಿದ ಭಾರೀ ಮಳೆಗೆ ರಸ್ತೆಗಳು ಹಾಳಾಗಿದ್ದವು. ಈ ಹಿನ್ನಲೆಯಲ್ಲಿ ರಸ್ತೆ ಸಂಚಾರ ಸ್ಥಗಿತಗೊಳಿಸಿದ್ದರು. ಇದೀಗ 24 ಗಂಟೆಯೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚರಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಆದೇಶಿಸಿದ್ದಾರೆ.
ಕಾರುಗಳು, ಜೀಪು, ಟೆಂಪೋ, ವ್ಯಾನ್, ಮಿನಿ ವ್ಯಾನ್ , ಅಂಬುಲೆನ್ಸ್, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಹಾಗೇ ಫೋಟೋಗ್ರಾಫಿ, ಸೆಲ್ಫಿ ತೆಗೆಯುವುದಕ್ಕೆ ನಿಷೇಧ ಹೇರಲಾಗಿದೆ.