ದೇಶದಲ್ಲಿ ಸತತ 35 ಬಾರಿ ಏರಿಕೆ ಕಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಕೊನೆಗೂ ಇಳಿಯಲಿದೆ ಎಂದು ಮೂಲಗಳು ಹೇಳಿವೆ.
ಹೌದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ತೆರಿಗೆ ಕಡಿತ ಮಾಡಲು ಹಿಂದೇಟು ಹಾಕಿದ್ದರೂ ಯಾವುದೇ ಕ್ಷಣದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಮೇ ತಿಂಗಳಲ್ಲಿ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಹೊರಬಿದ್ದ ನಂತರ ಒಂದು ದಿನ ಬಿಟ್ಟು ಒಂದು ದಿನದಂತೆ ಸುಮಾರು 36 ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದ್ದು, ಇದೇ ಮೊದಲ ಬಾರಿ ಶತಕ ದಾಟಿ ಸಾರ್ವಕಾಲಿಕ ದಾಖಲೆಯ ಮಟ್ಟದಲ್ಲಿ ನಿಂತಿದೆ.
ಜಾಗತಿಕ ಮಟ್ಟದಲ್ಲಿ ತೈಲ ಬೇಡಿಕೆ ದಿನೇದಿನೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಉತ್ಪಾದನೆ ನಿರ್ದಿಷ್ಟ ಪ್ರಮಾಣಕ್ಕೆ ಸೀಮಿತವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ತೈಲ ಉತ್ಪಾದನೆ ಹೆಚ್ಚಿಸುವಂತೆ ಒಪೆಕ್ ಸಮೂಹಗಳಿಗೆ ಮನವಿ ಮಾಡಿದೆ.
ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಮನವಿ ಹಿನ್ನೆಲೆಯಲ್ಲಿ ಒಪೆಕ್ ಮತ್ತು ರಷ್ಯಾ ಸರಕಾರಗಳು ತೈಲ ಉತ್ಪಾದನೆಯ ಪ್ರಮಾಣವನ್ನು 4 ಲಕ್ಷ ಬ್ಯಾರೆಲ್ಸ್ ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಆಗಸ್ಟ್ ನಿಂದ ಹೆಚ್ಚಿಸುವ ಚಿಂತನೆ ಇದ್ದರೂ ಯಾವುದೇ ಕ್ಷಣದಲ್ಲಿ ಈ ನಿಯಮ ಜಾರಿಗೆ ಬರಬಹುದು. ಇದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಇಳಿಕೆಯಾಗಿ, ದೇಶದಲ್ಲಿ ಇದರ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗಿದೆ.