ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಪ್ರತಿ ಲೀಟರ್ ಗೆ ಎರಡು ರೂಪಾಯಿ ಕಡಿತಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಕಲಬುರ್ಗಿಯಲ್ಲಿ ಏರ್ಪಡಿಸಲಾಗಿದ್ದ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಸೆಸ್ ಕಡಿತದ ನಿರ್ಧಾರ ಪ್ರಕಟಿಸಿದರು. ಪೆಟ್ರೋಲ್ ಮತ್ತು ಡೀಸೆಲ್ ಗಗನ ಮುಖಿಯಾಗಿರುವುದರಿಂದ ಜನತೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ.
ಹೀಗಾಗಿ ಜನರ ಒಂದಷ್ಟು ಭಾರವನ್ನಾದರೂ ಇಳಿಸಬೇಕೆಂಬ ಉದ್ದೇಶದಿಂದ ಪ್ರತಿ ಲೀಟರ್ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ಕನಿಷ್ಟ 2 ರೂಪಾಯಿ ಸೆನ್ ತೆರಿಗೆ ಕಡಿತಗೊಳಿಸಲಾಗುವುದು ಎಂದರು. ರಾಜ್ಯದ ಜನತೆಗೆ ವಿಮೋಚನಾ ದಿನ ದಿನದ ಕೊಡುಗೆಯಾಗಿದೆ ಎಂದು ಕುಮಾರಸ್ವಾಮಿ ಪ್ರಕಟಿಸಿದರು.