Webdunia - Bharat's app for daily news and videos

Install App

ವಾಹನ ಸವಾರರಿಗೆ ಗುಡ್ ನ್ಯೂಸ್: ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ ವಾಪಸ್

Webdunia
ಬುಧವಾರ, 11 ಅಕ್ಟೋಬರ್ 2017 (17:17 IST)
ಬೆಂಗಳೂರು: ವಾಹನ ಸವಾರರಿಗೆ ಪೆಟ್ರೋಲ್ ಬಂಕ್ ಮಾಲೀಕರು ಸಿಹಿ ಸುದ್ದಿ ನೀಡಿದ್ದಾರೆ. ನಾಳೆಯಿಂದ ಮುಷ್ಕರ ನಡೆಸಲು ತೀರ್ಮಾನಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಪೆಟ್ರೋಲ್-ಡೀಸೆಲ್ ಡೀಲರ್ಸ್ ಅಸೋಸಿಯೇಷನ್ ಅ. 13 ರಂದು ದೇಶಾದ್ಯಂತ ಪೆಟ್ರೋಲ್ ಬಂಕ್ ಬಂದ್ ನಡೆಸಲು ನಿರ್ಧರಿಸಿತ್ತು. ಸರ್ಕಾರ ನಿತ್ಯ ದರದ ಪರಿಷ್ಕರಣೆ ಕೈ ಬಿಡಲು ಹಾಗೂ ಅಪೂರ್ಣ ಚಂದ್ರ ಕಮಿಟಿ ವರದಿ ಜಾರಿ ಮಾಡುವಂತೆ ಒತ್ತಾಯಿಸಿ ನಾಳೆಯಿಂದ ಮೂರುದಿನ ಪೆಟ್ರೋಲ್ ಬಂಕ್ ಬಂದ್ ಮಾಡಲು ಪೆಟ್ರೋಲ್ ಮಾಲೀಕರ ಸಂಘ ನಿರ್ಧರಿಸಿತ್ತು.

ಆದರೆ ತೈಲ ಕಂಪನಿಗಳು ಮಾತುಕತೆ ಗೆ ಮುಂದಾದ ಹಿನ್ನೆಲೆಯಲ್ಲಿ ಬಂಕ್ ಮಾಲೀಕರು ಈ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಒಂದು ವೇಳೆ ಕೇಂದ್ರ ಸರ್ಕಾರ ಪೆಟ್ರೋಲ್-ಡೀಸೆಲ್ ಅನ್ನು ಜಿಎಸ್‍ಟಿ ವ್ಯಾಪ್ತಿಗೆ ತೆಗೆದುಕೊಳ್ಳದಿದ್ದರೆ, ಅ. 27 ರಿಂದ ಅನಿರ್ಧಿಷ್ಟಾವಧಿ ಬಂದ್ ನಡೆಸುವುದಾಗಿ ಪೆಟ್ರೋಲ್ ಡೀಸೆಲ್ ಡೀಲರ್ಸ್ ಅಸೋಸಿಯೇಷನ್ ತಿಳಿಸಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments