Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕಾಂಗ್ರೆಸ್ ಕಾಲದಲ್ಲಿ ಹಿಂದೂಗಳ ಹತ್ಯೆಯಾಗಿತ್ತು.. ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ಇದ್ದಾಗಲೂ ಅದೇ ಸ್ಥಿತಿ ಇತ್ತು ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಇದ್ದಾಗ ಒಂದು ರೀತಿ ನೆಗೆಟಿವ್ ವಾತಾವರಣ ಇತ್ತು, PFI ಹಾವಳಿ ಹೆಚ್ಚಾಗಿತ್ತು.. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಏನು ಮಾಡಲಿಲ್ಲ. ಕೇವಲ PFI ಮಾತ್ರ ಅಭಿವೃದ್ಧಿ ಆಯಿತು.. ಕಾಂಗ್ರೆಸ್ ಇಷ್ಟು ವರ್ಷ ಸಾಮಾಜಿಕ ನ್ಯಾಯಕ್ಕಾಗಿ ಏನೂ ಮಾಡಿಲ್ಲ ಎಂದರು.. ಇನ್ನು ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಿಂದಿನ ಸರ್ಕಾರ 4% ಅಸಂವಿಧಾನತ್ಮಕವಾಗಿ ಮುಸ್ಲಿಮರಿಗೆ ಮೀಸಲಾತಿ ನೀಡಿತ್ತು.. ಅದನ್ನು ಲಿಂಗಾಯತ, ಒಕ್ಕಲಿಗರಿಗೆ ತಲಾ 2% ನೀಡಲಾಗಿದೆ.. ಇನ್ನು ಶಾಸಕ ರಾಮ್ದಾಸ್ರನ್ನು ಹಾಡಿಹೊಗಳಿದ್ರು.. ರಾಮ್ದಾಸ್ ನಾಲ್ಕು ಬಾರಿ ಶಾಸಕರಾಗಿ ಕ್ಷೇತ್ರದಲ್ಲಿ ಕೆಲಸ ಮಾಡಿದ್ದರು..ಶ್ರೀವತ್ಸ ಅವರಿಗೆ ಸ್ಥಾನ ಬಿಟ್ಟು ಕೊಟ್ಟಿದ್ದಾರೆ, ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ ಎಂದಿದ್ದಾರೆ