ಬೆಂಗಳೂರು: ಹಂದಿಯ ಚಿಪ್ಪುಗಳನ್ನು ಮಾರಾಟ ಬಂದಿದ್ದ ಬಳ್ಳಾರಿ ಮೂಲದ ಇಬ್ಬರು ಆರೋಪಿಗಳನ್ನು ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿ 8 ಕೆ.ಜಿ 200 ಗ್ರಾಂ ತೂಕದ ಹಂದಿ ಚಿಪ್ಪುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಳ್ಳಾರಿ ಜಿಲ್ಲೆಯ ಸಂಡೂರು ನಿವಾಸಿಗಳಾದ ಇಬ್ರಾಹಾಂ ಮತ್ತು ಮರಿಸ್ವಾಮಿ ಬಂಧಿತ ಆರೋಪಿಗಳು. ಇಬ್ಬರು ಕಾನೂನು ಬಾಹಿರವಾಗಿ ಅಳಿವಿನಂಚಿನಲ್ಲಿರುವ ಚಿಪ್ಪು ಹಂದಿಯ ಮೇಲ್ಮೈ ಚಿಪ್ಪುಗಳನ್ನು ಸಂಗ್ರಹಿಸ್ಕೊಂಡು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮಾಹಿತಿ ಪೊಲೀಸ್ ಇಲಾಖೆಗೆ ದೊರೆತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾರ್ಯಪ್ರವೃತ್ತರಾದ ಸಿಬ್ಬಂದಿ ದಾಳಿ ನೆಡಸಿ ಇಬ್ಬರನ್ನು ಬಂಧಿಸಿದ್ದಾರೆ . ಹಂದಿಯ ಚಿಪ್ಪುಗಳನ್ನು ಸ್ಥಳದಲ್ಲಿಯೇ ವಶಪಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ:
ಪ್ರಕರಣದ ಕುರಿತು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.