ಮೈಸೂರು : ಶಾಲಾ ಮಕ್ಕಳು ಬಿಸಿಯೂಟ ಸೇವಿಸಿ ಅಸ್ವಸ್ಥರಾದ ಘಟನೆಗಳನ್ನು ನಾವು ಹಲವು ಬಾರಿ ಕೇಳಿದ್ದೇವೆ. ಆದರೆ ಇದೀಗ ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟಕ್ಕೆಂದು ಬಂದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿರುವ ಮಾಹಿತಿ ತಿಳಿದುಬಂದಿದೆ.
ತಿ.ನರಸೀಪುರ ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲಾ ಮಕ್ಕಳ ಬಿಸಿಯೂಟಕ್ಕೆಂದು ಸರಬರಾಜು ಆದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಇರುವುದು ತಿಳಿದುಬಂದಿದೆ. ಶಾಲೆಯ ಅಡುಗೆ ಸಹಾಯಕರು ಮಕ್ಕಳ ಬಿಸಿಯೂಟಕ್ಕೆಂದು ಅಕ್ಕಿ ಸೋಸುವಾಗ ಪ್ಲಾಸ್ಟಿಕ್ ಅಕ್ಕಿಕಾಳುಗಳು ಪತ್ತೆಯಾಗಿವೆ.
ಈ ಹಿನ್ನಲೆಯಲ್ಲಿ ಪಾಲಕರು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಒಳಪಡಿಸಬೇಕು ಹಾಗೂ ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.