ನೋಟ್ ಬ್ಯಾನ್ ಆದ 50 ದಿನಗಳಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ನನ್ನನ್ನು ಸುಟ್ಟು ಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಸಮಸ್ಯೆ ಬಗೆಹರಿದಿಲ್ಲ. ಈಗ ಅವರನ್ನು ಬಿಡಬೇಕಾ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ನೋಟ್ ಬ್ಯಾನ್‌ನಿಂದ ಸಂಭವಿಸಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸದ ಕೇಂದ್ರ ಸರಕಾರದ ನೀತಿಯನ್ನು ಖಂಡಿಸಿ ಜನವರಿ 5ರಂದು ರಾಜ್ಯಾಧ್ಯಂತ ಪ್ರತಿಭಟನೆ ನಡೆಸಲಿದ್ದೇವೆ ಎಂದು ಎಚ್ಚರಿಕೆ ನೀಡಿದರು.
ವಿದೇಶದಲ್ಲಿರುವ ಕಪ್ಪು ಹಣವನ್ನು ತಂದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದರು. ಇದು ನೋಡಿ ಪ್ರಧಾನಿ ನನಗೆ 15 ಲಕ್ಷ ರೂಪಾಯಿಗಳ ಚೆಕ್ ಕಳುಹಿಸಿದ್ದಾರೆಂದು ನಕಲಿ ಚೆಕ್ ಪ್ರದರ್ಶಿಸಿ ವ್ಯಂಗ್ಯವಾಡಿದರು.
ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಗೆ ಗೈರು ಹಾಜರಾಗಿರುವ ಹಲವು ಸಚಿವರು ಹಾಗೂ ಶಾಸಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ