Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೊನೆಗೂ ಸಿಎಂ ಭೇಟಿಗೆ ಸಮಯಾವಕಾಶ ನೀಡಿದ ಪಿಎಂ..

ಕೊನೆಗೂ ಸಿಎಂ ಭೇಟಿಗೆ ಸಮಯಾವಕಾಶ ನೀಡಿದ ಪಿಎಂ..
ಬೆಂಗಳೂರು , ಬುಧವಾರ, 28 ಡಿಸೆಂಬರ್ 2016 (10:32 IST)
ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಕೇಂದ್ರದಿಂದ ಹೆಚ್ಚಿನ ಪರಿಹಾರ ಕೋರಿ ಮನವಿ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಕೊನೆಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಸಮಯಾವಕಾಶ ನೀಡಿದ್ದಾರೆ.
ಡಿಸೆಂಬರ್ 30 ರಂದು ಸಂಜೆ 5 ಗಂಟೆಗೆ ಕಾಲಾವಕಾಶ ನಿಗದಿಪಡಿಸಲಾಗಿದೆ ಎಂದು ಪ್ರಧಾನಿ ಕಾರ್ಯಾಲಯದಿಂದ ಮುಖ್ಯಮಂತ್ರಿಗಳ ಕಚೇರಿಗೆ ಮಾಹಿತಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.
 
ಬರದಿಂದ ತತ್ತರಿಸುವ ಕರ್ನಾಟಕದ ಸಮಸ್ಯೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಟ್ಟಿಸಲು ಒಂದು ತಿಂಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಯತ್ನಿಸಿದ್ದರು. ಆದರೆ, ಪ್ರಧಾನಿ ಮೋದಿ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ.
 
ಮಹದಾಯಿ ಸೇರಿದಂತೆ ರಾಜ್ಯದ ವಿವಿಧ ಸಮಸ್ಯೆಗಳನ್ನು ಪ್ರಧಾನಿ ಗಮನಕ್ಕೆ ತರಲು ಅವರ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ಅವರು ಏಳು ಬಾರಿ ಪತ್ರವನ್ನು ಸಹ ಬರೆದಿದ್ದರು. ಆದರೆ, ಪ್ರಧಾನಿ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ.  
 
ಪಿಎಂ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪದೇ ಪದೇ ಆರೋಪಿಸುತ್ತಿದ್ದರಿಂದ ಜನವರಿ 7ರಂದು ರಾಜ್ಯಕ್ಕೆ ಆಗಮಿಸಿದಾಗ ಮುಜುಗರ ಉಂಟಾಗಬಹುದು ಎಂಬ ಕಾರಣಕ್ಕೆ ಅದಕ್ಕೂ ಮುನ್ನವೇ ಸಿದ್ದರಾಮಯ್ಯ ಭೇಟಿಗೆ ಪ್ರಧಾನಿ ಸಮಯ ನಿಗದಿಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

'ಕೈ' ಬಿಟ್ಟು 'ತೆನೆ' ಹೊರ್ತಾರಾ ಸಿಎಂ ಇಬ್ರಾಹಿಂ?