ಪ್ರಧಾನಿ ನರೇಂದ್ರ ಮೋದಿ ಅವರು ಸದಾನಂದಗೌಡರ ಹಾಗೂ ಬಿಜೆಪಿಯವರ ಸ್ವಂತ ಆಸ್ತಿಯಲ್ಲ. ಅವರು ದೇಶದ ಆಸ್ತಿ. ಬಿಎಸ್.ಯಡಿಯೂರಪ್ಪ ಹಾಗೂ ಸದಾನಂದಗೌಡರ ಮೇಲೆ ಗೌರವವಿದೆ. ಆದರೆ, ಕಾವೇರಿ ವಿಚಾರದಲ್ಲಿ ಪ್ರಧಾನಿ ಮಧ್ಯಸ್ಥಿಕೆ ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕರು ನೀಡುವುದು ಎಷ್ಟು ಸರಿ ಎಂದು ಜೆಡಿಎಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಶಾಸಕ ಚೆಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕಾಗುತ್ತದೆ. ಸುಪ್ರೀಂ ಆದೇಶ ವಿರುದ್ಧ ಹಾಕಿಕೊಂಡವರು ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರು ಮಾತ್ರ. ವಿವಾದದ ಕುರಿಕು ತಜ್ಞರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಾಕಷ್ಟು ಮಾಹಿತಿ ನೀಡಿದ್ದಾರೆ. ಈ ಸುಪ್ರೀಂ ತೀರ್ಪಿನ ಕುರಿತು ಕಾನೂನಾತ್ಮಕ ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಸಚಿವ ಸಂಪುಟದಲ್ಲಿ ರಾಜ್ಯದ ಮೂವರು ಸಚಿವರಿದ್ದಾರೆ. ಕಾವೇರಿ ವಿವಾದದ ಕುರಿತು ಪ್ರಧಾನಿಯೊಂದಿಗೆ ಚರ್ಚೆ ನಡೆಸಲಿ. ಕೋರ್ಟ್ ಆದೇಶದಂತೆ ಕಾವೇರಿಯಿಂದ ತಮಿಳುನಾಡಿಗೆ ನೀರು ಹರಿಸಿದರೇ ಮುಂದೆ ನಮಗೆ ಕುಡಿಯಲು ಸಹ ನೀರು ಸಿಗದ ಪರಿಸ್ಥಿತಿ ಬರುತ್ತದೆ ಎಂದು ಶಾಸಕ ಚೆಲುವರಾಯಸ್ವಾಮಿ ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ