ಕಾವೇರಿ ನದಿ ನೀರು ಹಂಚಿಕೆಗೆ ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ಉಭಯ ರಾಜ್ಯಗಳ ನಡುವಿನ ಬಿಕ್ಕಟ್ಟನ್ನು ಇತ್ಯರ್ಥಗೊಳಿಸುವಂತೆ ಆ ಪುಣ್ಯಾತ್ಮ ಮೋದಿಗೆ ಏಷ್ಟು ಹೇಳಿದರು ಕೇಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಕಾವೇರಿ ವಿವಾದ ಆದಷ್ಟು ಬೇಗ ಇತ್ಯರ್ಥವಾಗಲಿ ಎಂದು ಸಿಎಂ ಸಿದ್ದರಾಮಯ್ಯ ಇಂದು ಮಹಾದೇಶ್ವರನ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಪರಸ್ಪರ ಮಾತುಕತೆಯ ಮೂಲಕ ಕಾವೇರಿ ವಿವಾದವನ್ನು ಬಗೆಹರಿಸಿಕೊಳ್ಳಲು ನಾವು ಸಿದ್ಧ. ಆದರೆ, ಇದಕ್ಕೆ ತಮಿಳುನಾಡು ಒಪ್ಪುತ್ತಿಲ್ಲ. ಆ ಪುಣ್ಯಾತ್ಮ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಲು ಸಿದ್ಧವಿಲ್ಲ ಎಂದರು.
ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವವಿದೆ. ಆದರೂ ಸಹ ಕಾವೇರಿಯಿಂದ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ. ನಮ್ಮ ರೈತರು ಬೆಳೆ ಬೆಳೆಯದೇ ತ್ಯಾಗ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ