Webdunia - Bharat's app for daily news and videos

Install App

ಪ್ರಧಾನಿ ಮೋದಿ ಹೇಳಿದ ಆ ‘ಮಹಾ’ ಮಾತು ಏನು ಗೊತ್ತಾ?

Webdunia
ಭಾನುವಾರ, 6 ಮೇ 2018 (07:07 IST)
ಗದಗ: ಮಹದಾಯಿ ವಿಚಾರವಾಗಿ ಹೋರಾಟಗಾರರು ಪ್ರಧಾನಿ ಮೋದಿ ವಿರುದ್ಧ ಪ್ರತಿಭಟನೆಗೆ ಸಜ್ಜಾದ ಬೆನ್ನಲ್ಲೇ ಅವರೇ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಗದಗದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಮಹದಾಯಿ ವಿವಾದ ಇಷ್ಟೊಂದು ಬೆಳೆಯಲು ಕಾಂಗ್ರೆಸ್ ಸರ್ಕಾರಗಳೇ ಕಾರಣ ಎಂದು ದೂರಿದ್ದಾರೆ.

‘ಮೂರು ದಶಕಗಳಿಂದ ಈ ಸಮಸ್ಯೆಯನ್ನು ಇಷ್ಟೊಂದು ಎಳೆಯಲು ಬಿಟ್ಟಿದ್ದು ಕಾಂಗ್ರೆಸ್. ಮಹದಾಯಿ ವಿವಾದ ಆರಂಭವಾದಾಗ ಕೇಂದ್ರದಲ್ಲಿ, ಗೋವಾದಲ್ಲಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೇ ಇತ್ತು. ಅವರೇ ಇದನ್ನು ಬಗೆಹರಿಸಿಕೊಳ್ಳಬಹುದಿತ್ತು. ಆದರೆ ಕಾಂಗ್ರೆಸ್ ವಿವಾದವನ್ನು ನ್ಯಾಯಾಧಿಕರಣಕ್ಕೆ ಬಿಡುವ ಪಾಪದ ಕೆಲಸ ಮಾಡಿತು.

ನೀರು ಎಲ್ಲರ ಅಗತ್ಯವಾಗಿದೆ. ನನಗೆ ಈ ವಿಚಾರದಲ್ಲಿ ಅನಗತ್ಯ ರಾಜಕೀಯ ಮಾಡಲು ಇಷ್ಟವಿಲ್ಲ. ಹಾಗಾಗಿ ಸೂಕ್ತ ರೀತಿಯಲ್ಲಿ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳುತ್ತೇನೆ’ ಎಂದು ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments