ತುಮಕೂರು : ತುಮಕೂರಿಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ಭೇಟಿಯ ವೇಳೆ ರೈತರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.
ರೈತಸಂಘ, ಹಸಿರು ಸೇನೆ ಪ್ರತಿಭಟನೆಗೆ ನಿರ್ಧಾರ ಮಾಡಿದ್ದು, ರೈತರ ಸಮಸ್ಯೆಗೆ ಪ್ರಧಾನಿ ಸ್ಪಂದಿಸಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ ಡಿಸಿ ಕಚೇರಿಯಿಂದ ಕಾಲ್ನಡಿಗೆಯಲ್ಲಿ ಕಾರ್ಯಕ್ರಮ ಸ್ಥಳಕ್ಕೆ ಕಪ್ಪು ಬಟ್ಟೆ ಧರಿಸಿ ರೈತ ಮುಖಂಡರು ಆಗಮಿಸಲಿದ್ದಾರೆ.
ಹಾಗೇ ಪ್ರಧಾನಿ ಮೋದಿ ರಾಜ್ಯ ಭೇಟಿಗೆ ಕಾಂಗ್ರೆಸ್ ಕಿಸಾನ್ ಘಟಕದಿಂದ ತೀವ್ರ ವಿರೋಧ ವ್ಯಕ್ತವಾಗಿದ್ದು, ಮೋದಿ ಭೇಟಿ ವಿರೋಧಿಸಿ ಆತ್ಮಹತ್ಯೆಗೆ ಶರಣಾದ ರೈತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಲಿದ್ದಾರೆ ಎನ್ನಲಾಗಿದೆ.