Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ರಾಜ್ಯ ರಾಜಧಾನಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಹೀಗಾಗಿ ಸಂಚಾರಿ ಪೊಲೀಸರು ಮಾರ್ಗದ ಬದಲಾವಣೆ ಮಾಡಿದ್ದಾರೆ.
ಇಂದು ಮಧ್ಯಾಹ್ನ 2.10 ಕ್ಕೆ ಮೋದಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಈ ಸಂದರ್ಭದಲ್ಲಿ ಹೆಣ್ಣೂರು-ಬಾಗಲೂರು ಮತ್ತು ವಿಮಾನ ನಿಲ್ದಾಣಕ್ಕೆ ತೆರಳುವ ರಸ್ತೆಗಳಲ್ಲಿ ಸಂಚಾರ ವ್ಯತ್ಯಯವಾಗಲಿದೆ.
ಪ್ರಧಾನಿ ಭೇಟಿ ಹಿನ್ನಲೆಯಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಗೊಲ್ಲಹಳ್ಳಿ ಗೇಟ್ ನಿಂದ ಹುನಚೂರುವರೆಗೆ, ಏರ್ ಲೈನ್ಸ್ ಡಾಬಾದಿಂದ ಬೂದಿಗೆರೆಯವರೆಗೆ, ಹೆಣ್ಣೂರು-ಬಾಗಲೂರು ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಚಿಕ್ಕಜಾಲ ಕೋಟೆ ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಬಗಲೂರಿನಿಂದ ವಿಮಾನ ನಿಲ್ದಾಣದವರೆಗೆ ಸಂಚಾರ ನಿಷೇಧಿಸಲಾಗಿದೆ.
ಪ್ರಧಾನಿ ಆಗಮನದ ಹಿನ್ನಲೆಯಲ್ಲಿ ಭದ್ರತೆ ದೃಷ್ಟಿಯಿಂದ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ದೇವನಹಳ್ಳಿಯಲ್ಲಿ ಬೋಯಿಂಗ್ ಇಂಡಿಯಾ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ ನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ.