Daily Horoscope
✕

ರಾಜ್ಯಕ್ಕೆ ಮತ್ತೆ ಪ್ರಧಾನಿ ಮೋದಿ: ಸಮಾವೇಶದಲ್ಲಿ ಭಾಗಿ

Krishnaveni K
ಬುಧವಾರ, 17 ಏಪ್ರಿಲ್ 2024 (12:37 IST)
ಬೆಂಗಳೂರು: ಮೊನ್ನೆಯಷ್ಟೇ ಮೈಸೂರು, ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ಮಾಡಿದ್ದ ಪ್ರಧಾನಿ ಮೋದಿ ಮತ್ತೊಮ್ಮೆ ಇದೀಗ ಕರ್ನಾಟಕಕ್ಕೆ ಬರಲಿದ್ದಾರೆ.

ಈ ಬಾರಿ ಚಿಕ್ಕಬಳ್ಳಾಪುರ, ಬೆಂಗಳೂರು ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮೋದಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಒಂದೇ ದಿನ ಎರಡೂ ಕಡೆ ಸಮಾವೇಶ ನಡೆಯಲಿದ್ದು, ಎರಡೂ ಕಡೆ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಸಚಿವ ಡಾ. ಕೆ. ಸುಧಾಕರ್ ಸ್ಪರ್ಧಿಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಈಗಾಗಲೇ ಗ್ರಾಮಾಂತರ ಕ್ಷೇತ್ರದಲ್ಲಿ ಗೃಹಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ ಮೂಲಕ ಪ್ರಚಾರ ನಡೆಸಿದ್ದರು. ಇದೀಗ ಮೋದಿ ಬೆಂಗಳೂರಿನ ಎಲ್ಲಾ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲಿದ್ದಾರೆ. ಈ ವೇಳೆ ಬೆಂಗಳೂರಿನ ಎಲ್ಲಾ ಅಭ್ಯರ್ಥಿಗಳು ಹಾಜರಿರಲಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಮೋದಿ ಮಾತನಾಡಲಿದ್ದಾರೆ. ಅದಾದ ಬಳಿಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಂಜೆ 6 ಗಂಟೆಗೆ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಆಗಮನ ಹಿನ್ನಲೆಯಲ್ಲಿ ಇಂದಿನಿಂದಲೇ ಅರಮನೆ ಮೈದಾನದಲ್ಲಿ ತಯಾರಿ ಆರಂಭವಾಗಿದೆ.

ಮೊನ್ನೆಯಷ್ಟೇ ಮೈಸೂರಿನಲ್ಲಿ ಪ್ರಧಾನಿ ಮೋದಿ ಬಿಜೆಪಿ ಮತ್ತು ಜೆಡಿಎಸ್ ಸಮಾವೇಶದಲ್ಲಿ ಮೋದಿ ಭಾಗಿಯಾಗಿದ್ದರು. ಈ ವೇಳೆ ಎರಡೂ ಪಕ್ಷಗಳೂ ತಮ್ಮ ಒಗ್ಗಟ್ಟು ಪ್ರದರ್ಶಿಸಿದ್ದವು. ಅದಾದ ಬಳಿಕ ಮಂಗಳೂರಿನಲ್ಲಿ ರೋಡ್ ಶೋ ನಡೆಸಿದ್ದರು. ಈ  ವೇಳೆ ಸಾವಿರಾರು ಜನ ಸೇರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಟೌನ್ ಹಾಲ್ ಬಳಿ ತಿರಂಗಾ ಮಾರ್ಚ್ ಮಾಡಲು ಹೊರಟ ಸಿಜೆಪಿಗೆ ಒಪ್ಪಿಗೆ ಕೊಡದ ರಾಜ್ಯ ಸರ್ಕಾರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಮುಂದಿನ ಸುದ್ದಿ
Show comments