`ಪರ್ ಡ್ರಾಪ್ ಮೋರ್ ಕ್ರಾಪ್’ ಜಾರಿಗೊಳಿಸೋಣ: ಪ್ರಧಾನಿ ಮೋದಿ

Webdunia
ಭಾನುವಾರ, 29 ಅಕ್ಟೋಬರ್ 2017 (13:07 IST)
ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ದೇವರ ದರ್ಶನ ಪಡೆದು ಇದೀಗ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಉದ್ಯೋಗ ಮಾಡುವ ಮಹಿಳೆಯರಿಗೆ ರುಪೆ ಕಾರ್ಡ್ ವಿತರಿಸಿ ಮಾತನಾಡಿದ ಪ್ರಧಾನಿ ಮೋದಿ, ನಮೋ ಮಂಜುನಾಥ ಎಂದು ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಕನ್ನಡದಲ್ಲಿ `ನನ್ನ ಪ್ರೀತಿಯ ಬಂಧು-ಭಗಿನಿಯರೆ ನಿಮಗೆಲ್ಲ ನನ್ನ ನಮಸ್ಕಾರಗಳು. ನನ್ನ ಪ್ರೀತಿಯ ಸೋದರಿಯರಿಗೆ ವಿಶೇಷ ಅಭಿನಂದನೆಗಳು ಎಂದರು.

ಮಂಜುನಾಥನ ದರ್ಶನ ಪಡೆಯುವ ಅವಕಾಶ ಸಿಕ್ಕಿದ್ದು ನನ್ನ ಸೌಭಾಗ್ಯ. ಅದರ ಜತೆ ನಿಮ್ಮ ಭೇಟಿಯಾಗುವ ಅವಕಾಶ ಸಿಕ್ಕಿದೆ. ಕಳೆದ ವಾರ ಆದಿ ಶಂಕರಾಚಾರ್ಯರು ಸ್ಥಾಪಿಸಿದ ಕೇದಾರನಾಥ ದರ್ಶನ ಪಡೆದೆ. ಇಂದು ದಕ್ಷಿಣದ ಮಂಜುನಾಥನ ದರ್ಶನ ಪಡೆದೆ ಎಂದರು.

ವೀರೇಂದ್ರ ಹೆಗ್ಗಡೆ ಸಾಧನೆಗಳ ಬಗ್ಗೆ ಶ್ಲಾಘನೆ ಮಾಡಿದ ಪ್ರಧಾನಿ, 50 ವರ್ಷ ಸಮಾಜದ ಹಿತಕ್ಕಾಗಿ ಹೆಗಡೆಯವರು ದುಡಿದಿದ್ದಾರೆ. ಕೇಂದ್ರ ಸರ್ಕಾರದ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹೆಗಡೆಯವರೇ ಪ್ರೇರಣೆ. ಸಣ್ಣ ವಯಸ್ಸಿನಿಂದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ನಿಮ್ಮ ಸಾಧನೆ ನಮ್ಮೆಲ್ಲರಿಗೂ ಪ್ರೇರಣೆಯ ವಿಷಯ. ತತ್ವವನ್ನೇ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಅಳವಡಿಸಿಕೊಂಡಿದ್ದಾರೆ. ಭಗವದ್ಗೀತೆ ನಿಷ್ಕಾಮಕರ್ಮ ಯೋಗಕ್ಕೆ ನೀವು ಸಾಕ್ಷಿ. ಹೆಗ್ಗಡೆಯವರು ಮಹಾನ್ ತಪಸ್ವಿ. ಅವರ ಎದುರು ನಾನು ಬಹಳ ಚಿಕ್ಕವನು. ಆದರೆ ಜನ ಪ್ರಧಾನಿ ಸ್ಥಾನದಲ್ಲಿ ನನ್ನನ್ನು ಕೂರಿಸಿದ್ದಾರೆ. ಹೀಗಾಗಿ ದೇಶದ ಜನರ ಪರವಾಗಿ ಅವರನ್ನು ಸನ್ಮಾನಿಸಿದ್ದೇನೆ. ಸಾಮಾನ್ಯ ವ್ಯಕ್ತಿಯಾದ ನನಗೆ ಸನ್ಮಾನ ಮಾಡುವ ಅಗತ್ಯವಿರಲಿಲ್ಲ ಎಂದರು.

ರಾಷ್ಟ್ರವನ್ನು ಡಿಜಿಟಲ್ ಮಾಡುವತ್ತ ಹೆಜ್ಜೆಯಿಡುತ್ತಿದ್ದೇವೆ. ಇಡೀ ಭಾರತವನ್ನು ಕ್ಯಾಶ್ ಲೆಸ್ ಮಾಡುತ್ತಿದ್ದೇವೆ. ಮಹಿಳಾ ಫಲಾನಿಭಾವಿಗಳಿಗೆ ರುಪೆ ಕಾರ್ಡ್ ವಿತರಿಸಿದ್ದು ಸಂತಸ ತಂದಿದೆ. ಸಮಾಜದಲ್ಲಿ ಸಾಕಷ್ಟು ಒಳ್ಳೆಯ ಸಂಗತಿಗಳಿವೆ. ಅವನ್ನು ಇನ್ನಷ್ಟು ಉತ್ತಮಗೊಳಿಸುವ ಅವಕಾಶವಿದೆ. ಕುಟುಂಬದ ಎಲ್ಲಾ ಸದಸ್ಯರು ಆರ್ಥಿಕ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳುತ್ತಿದ್ದಾರೆ. 21ನೇ ಶತಮಾನದಲ್ಲಿ ಕೌಶಲ್ಯ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದರು.

ಧರ್ಮಸ್ಥಳದಿಂದ ಸಾಕಷ್ಟು ಆಂದೋಲನಗಳು ಪ್ರಾರಂಭವಾಗಿವೆ. ವಿಶ್ವದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದೆ. ಹನಿ ನೀರನ್ನು ಹೇಗೆ ಬಳಸಬೇಕು ಎಂಬುದನ್ನು ಯೋಚಿಸೋಣ. ಭೂ ಮಾತೆಯ ಬಗ್ಗೆ ನಮಗೆ ಕಿಂಚಿತ್ತೂ ಕಾಳಜಿಯಿಲ್ಲ. ಭೂಮಾತೆಯ ಸಾರವನ್ನು ಹಾಳು ಮಾಡುತ್ತಿದ್ದೇವೆ. ಹನಿನೀರನ್ನು ಸರಿಯಾಗಿ ಬಳಸುವ ಪಣತೊಡೋಣ. ಹೀಗಾಗಿ ಧರ್ಮಾಧಿಕಾರಿ ನೇತೃತ್ವದಲ್ಲಿ ಪಣತೊಡೋಣ. 2022ರ ವೇಳೆಗೆ ಯೂರಿಯಾ ಬಳಕೆ ಅರ್ಧಕ್ಕೆ ಇಳಿಸೋಣ. `ಪರ್ ಡ್ರಾಪ್ ಮೋರ್ ಕ್ರಾಪ್’ ಜಾರಿಗೊಳಿಸೋಣ ಎಂದರು.

ಇದೇ ಸಂದರ್ಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಕಂಬಳ ಕುರುಹು ನೊಗದ ಮಾದರಿ ನೀಡಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಕೇಂದ್ರ ಸಚಿವರಾದ ಅನಂತ್ ಕುಮಾರ್,  ಸದಾನಂದ ಗೌಡ, ಬೆಳ್ತಂಗಡಿ ಕಾಂಗ್ರೆಸ್ ಶಾಸಕ ವಸಂತ ಬಂಗೇರಾ ಹಾಜರಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ಕಾರ್ಯಕ್ರಮಕ್ಕೆ ಗೈರಾಗಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಮುಂದಿನ ಸುದ್ದಿ
Show comments