Webdunia - Bharat's app for daily news and videos

Install App

ಪೋಕ್ಸೋ ಪ್ರಕರಣ. ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಬಂಧನ ವಾರೆಂಟ್‌

sampriya
ಗುರುವಾರ, 13 ಜೂನ್ 2024 (16:26 IST)
Photo By X
ಬೆಂಗಳೂರು: ಅತ್ಯಾಚಾರವಾಗಿದೆಯೋ  ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ 17 ವರ್ಷದ ಬಾಲಕಿಯನ್ನು ಕೋಣೆಗೆ ಕರೆದುಕೊಂಡು ಹೋಗಿ ಆಕೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಂಧನ ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.

ಅವರನ್ನು ಬಂಧಿಸಲು ನಿರ್ದೇಶಿಸಬೇಕು ಎಂದು ರಾಜ್ಯ ಪ್ರಾಸಿಕ್ಯೂಷನ್ ನಗರದ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ. ರಮೇಶ್ ಗುರುವಾರ ವಿಚಾರಣೆ ನಡೆಸಿದರು‌.

ವಿಚಾರಣೆ ವೇಳೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಅಶೋಕ್ ನಾಯಕ್ ವಾದ ಮಂಡಿಸಿದರು. 

ವಾದದಲ್ಲಿ ಆರೋಪಿಯು ತುಂಬಾ ಬಲಾಢ್ಯ ರಾಜಕೀಯ ವ್ಯಕ್ತಿಯಾಗಿದ್ದು, ನಾಲ್ಕು ಬಾರಿ ರಾಜ್ಯದ ಮಖ್ಯಮಂತ್ರಿಯಾಗಿದ್ದರು. ಇನ್ನೂ ಇವರ ಇಬ್ಬರು ಮಕ್ಕಳಲ್ಲಿ ಒಬ್ಬರು ಹಾಲಿ ಸಂಸದರಾಗಿದ್ದು, ಮತ್ತೊಬ್ಬರು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿದ್ದಾರೆ. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ಬರಿದೆ ಸಮಯ ಕೇಳುತ್ತಿದ್ದಾರೆ ಎಂದರು.

ಇನ್ನೂ ಪ್ರಕರಣವನ್ನು ಮುಚ್ಚಿಹಾಕಲು ಯಡಿಯೂರಪ್ಪ ಅವರು ಬಾಲಕಿಯ ತಾಯಿಗೆ 2 ಲಕ್ಷ ನೀಡಿದ್ದಾರೆ. ಅವರು ಬೇಡ ಎಂದು ಹೇಳಿದರು ಅವರ ಪರ್ಸಿನಲ್ಲಿ ತುರುಕಿದ್ದಾರೆ. ನೀನು ಕಷ್ಟದಲ್ಲಿ ಇದ್ದೀಯ. ಇಟ್ಟುಕೊ ಎಂದು ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆ ತಾಯಿ ಮಾಡಿಕೊಂಡಿದ್ದ ವಿಡಿಯೊ ಡಿಲಿಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ ಎಂದರು.

ಹೀಗಿರುವಾಗ ಅವರಿಗೆ ಇನ್ನಷ್ಟು ಸಮಯ ನೀಡಿದ್ದಲ್ಲಿ ಪ್ರಕರಣದ ಸಾಕ್ಷ್ಯ ನಾಶ ಮಾಡುವ ಸಾಧತೆಯಿದ್ದು, ಕೂಡಲೇ ಆರೋಪಿಯನ್ನು ಬಂಧಿಸುವಂತೆ ಕೋರಿದರು. ‘ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು‘ ಎಂದು ಕೋರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ