Webdunia - Bharat's app for daily news and videos

Install App

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ರಿಲೀಫ್

sampriya
ಶುಕ್ರವಾರ, 14 ಜೂನ್ 2024 (18:02 IST)
ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಬಂಧನದ ಭೀತಿ ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸದ್ಯದ ರಿಲೀಫ್‌ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಸೂಚನೆ ನೀಡಿದೆ.

ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಮುಂದಿನ ವಿಚಾರಣೆ ತನಕ ಬಲವಂತದ ಕ್ರಮಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್‌ ಸೂಚಿಸಿದೆ.

ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿರುತ್ತವೆ. ಅವರು ತನಿಖಾ ತಂಡದ ಎದುರು ಜೂ.17 ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಇದೇ ವೇಳೆ ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಯಡಿಯೂರಪ್ಪಗೆ ಸೂಚಿಸಿದೆ.

ಬಿಎಸ್‌ವೈ ಪರ ವಕೀಲ ನಾಗೇಶ್ ಮಾತನಾಡಿ, ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ. ಈಗಾಗಲೇ ಆರೋಪಿ ವಿರುದ್ಧ ಅರೆಸ್ಟ್ ವಾರೆಂಟ್ ಮಾಡಿಸಿಕೊಂಡಿದ್ದಾರೆ. ಪ್ರಕರಣದ ವಿಚಾರಣೆಯನ್ನೇ ಮಾಡಬಾರದು ಎಂದು ವಾದ ಮಂಡಿಸಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ