Webdunia - Bharat's app for daily news and videos

Install App

ಫೋಕ್ಸೋ ಪ್ರಕರಣ: ಯಡಿಯೂರಪ್ಪ ಬಂಧಿಸದಂತೆ ಮಧ್ಯಂತರ ಜಾಮೀನು ವಿಸ್ತರಣೆ

Sampriya
ಶುಕ್ರವಾರ, 28 ಜೂನ್ 2024 (19:07 IST)
ಬೆಂಗಳೂರು:ಫೋಕ್ಸೋ ಪ್ರಕರಣ ಸಂಬಂಧ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬಿಗ್‌ ರಿಲೀಫ್ ಸಿಕ್ಕಿದೆ. ಫೋಕ್ಸೋ ಪ್ರಕರಣದ ಸಂಬಂಧ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಜಾರ್ಜ್‌ಶೀಟ್ ಬೆನ್ನಲ್ಲೇ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲಾರದೆಂದು ಜೂನ್ 14ರವರೆಗೆ ತಡೆ ನೀಡಿತ್ತು. ಇದೀಗ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನನ್ನು ನ್ಯಾಯಾಲಯ ವಿಸ್ತರಣೆ ಮಾಡಿದೆ.

ಅತ್ಯಾಚಾರ ನಡೆದ ಬಗ್ಗೆ  ದೂರು ನೀಡಲು ಬಂದ ಸಂತ್ರಸ್ತೆ ಜತೆ ಬಿಎಸ್ ಯಡಿಯೂರಪ್ಪ ಅನುಚಿತವಾಗಿ ವರ್ತಿಸಿದ್ದಾರೆಂದು ದೂರು ನೀಡಲಾಗಿತ್ತು. ಅದರಂತೆ ಬಿಎಸ್ ಯಡಿಯೂರಪ್ಪ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಬಿಎಸ್‌ವೈ ಜತೆಗೆ ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು.

ಇದಕ್ಕೆ ಸಂಬಂಧಿಸಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಗುರುವಾರ ಚಾರ್ಜ್‌ ಶಿಟ್‌ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ವಿಸ್ತರಣೆಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments