ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ವಿಕೃತಕಾಮಿಯೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಮಂಗಳೂರು ವಿಶ್ವವಿದ್ಯಾಲಯದ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ರಹಸ್ಯವಾಗಿ ಚಿತ್ರೀಕರಣ ಮಾಡುತ್ತಿದ್ದ ಸಂತೋಷ್ (22) ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದು, ಆತ ತಪ್ಪೊಪ್ಪಿಕೊಂಡಿರುವುದಾಗಿ ತಿಳಿದು ಬಂದಿದೆ.
ಶೌಚಾಲಯದಲ್ಲಿ ಮೊಬೈಲ್ ಅಡಗಿಸಿಟ್ಟು ಚಿತ್ರೀಕರಣ ನಡೆಸುತ್ತಿರುವುದನ್ನು ಅಗಸ್ಟ್ 24 ರಂದು ವಿದ್ಯಾರ್ಥಿನಿಯೊಬ್ಬಳು ಪತ್ತೆ ಮಾಡಿದ್ದಳು. ಈ ಕುರಿತು ಮೈಸೂರು ಜಿಲ್ಲೆಯ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಸಂತೋಷ್, ದ್ವೀತಿಯ ವರ್ಷ ಎಂಎಸ್ಇ ವ್ಯಾಸಾಂಗ ಮಾಡುತ್ತಿದ್ದಾನೆ ಎಂದು ತಿಳಿದು ಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ