Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಪೊಲೀಸ್ ಭರ್ಜರಿ ಕಾರ್ಯಾಚರಣೆ

ಪೊಲೀಸ್ ಭರ್ಜರಿ ಕಾರ್ಯಾಚರಣೆ
ಬೆಂಗಳೂರು , ಶನಿವಾರ, 5 ಮಾರ್ಚ್ 2022 (17:11 IST)
ಬೆಂಗಳೂರಿನ ಜೆಪಿ ನಗರದ ಬಳಿ ದರೋಡೆಗೆ ಹೊಂಚ ಹಾಕಿ ಕುಳಿತಿದ್ದ ತಂಡದ ಮೇಲೆ ದಿಢೀರ್ ದಾಳಿ ನಡೆಸಿದ ಕೋಣನಕುಂಟೆ ಪೊಲೀಸರು, ಐವರನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು 10 ಲಕ್ಷ ರೂ ಬೆಲೆ ಬಾಳುವ 200 ಗ್ರಾಂ ತೂಕದ ಚಿನ್ನಾಭರಣ ಮತ್ತು 3 ಲಕ್ಷ ರೂ ಬೆಲೆಬಾಳುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಇಲ್ಲಿನ ಜೆ.ಪಿ ನಗರದ ಬಳಿ ದರೋಡೆಗೆ ಹೊಂಚು ಹಾಕಿ ಕುಳಿತಿದ್ದ ವೇಳೆ ದಿಢೀರ್​ ದಾಳಿ ನಡೆಸಿರುವ ಕೋಣನಕುಂಟೆ ಪೊಲೀಸರು, ಐದು ಜನ ಆರೋಪಿಗಳನ್ನು ಬಂಧಿಸಿದ್ದಾರೆ.
 
ಬೆಂಗಳೂರು ನಗರದ ವಿವಿಧ ಏರಿಯಾಗಳಲ್ಲಿ ಹಗಲು ಮತ್ತು ರಾತ್ರಿ ವೇಳೆಯಲ್ಲಿ ಚಿನ್ನ ಕಳವು ಮತ್ತು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಐವರು ಕುಖ್ಯಾತ ಕಳ್ಳರನ್ನು ಬಂಧಿಸಿ ಜೈಲಿಗಟ್ಟಲಾಗಿದೆ ಎಂದು ನಗರ ಪೊಲೀಸ್ ದಕ್ಷಿಣ ವಿಭಾಗದ ಕೋಣನಕುಂಟೆ ಠಾಣೆಯ ಪೊಲೀಸರು ತಿಳಿಸಿದ್ದಾರೆ.
 
ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ಜೆ.ಪಿ.ನಗರ 8ನೇ ಹಂತದ ಕಂಬತ್ತಹಳ್ಳಿ ಮುಖ್ಯರಸ್ತೆ ಬಳಿಯ ಖಾಲಿ ಜಾಗದಲ್ಲಿ 6 ರಿಂದ 7 ಜನ ವ್ಯಕ್ತಿಗಳು ಮಾರಕಾಸ್ತ್ರಗಳೊಂದಿಗೆ ದರೋಡೆಗೆ ಮುಂದಾಗಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ದೊರೆಕಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್​ಐ ಅರುಣ್‌ಕುಮಾರ್‌ ಸಿಬ್ಬಂದಿಗಳೊಂದಿಗೆ ದಾಳಿ ಮಾಡಿ, ಆರೋಪಿಗಳಾದ ಉಲ್ಲಾಸ್ (19), ರಘು ನಾಯಕ್(19), ಸಲೀಂ (21), ಸಾಗರ್ (19), ನಂದನ (18), ಸುಮಂತ್ (20) ಎನ್ನುವವರನ್ನು ಬಂಧಿಸಿದ್ದಾರೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜಲವಿವಾದ ಕಾಯ್ದೆಯನ್ನು ತಿದ್ದುಪಡಿ ಮಾಡಬೇಕು