Publish Date: Sat, 11 May 2024 (18:19 IST)
Updated Date: Sat, 11 May 2024 (18:24 IST)
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ನಿನ್ನೆ ವಶಕ್ಕೆ ಪಡೆದಿದ್ದ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ವಿರುದ್ಧ ಸಾಲು ಸಾಲು ಆರೋಪ ಮಾಡಿ ಪ್ರಕರಣ ಸಂಬಂಧ ಸುದ್ದಿಯಲ್ಲಿದ್ದರು. ನಿನ್ನೆ ಅವರನ್ನು ಮಹಿಳೆಯೊಬ್ಬರು ಅವರ ವಿರುದ್ಧ ನೀಡಿದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಶಕ್ಕೆ ಪಡೆದು ಇಂದು ತೀವ್ರ ವಿಚಾರಣೆ ನಡೆಸಿದರು.
ಹೊಳೆ ನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಎರಡು ಕೇಸ್ ಗಳ ಸಂಬಂಧ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಸತತ ಮೂರು ಗಂಟೆಗಳ ವಿಚಾರಣೆ ನಂತರ ಇದೀಗ ಪೊಲೀಸರು ಅವರನ್ನು ಬಂಧಿಸಿದ್ದಾರೆ.
ನಿನ್ನೆ ಚಿತ್ರದುರ್ಗ ಬಳಿಯ ಕೆ.ಆರ್. ಹಳ್ಳಿ ಗೇಟ್ ಬಳಿ ಹಿರಿಯೂರು ಗ್ರಾಮಾಂತರ ಪೊಲೀಸರು ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಅವರ ತಂದೆ ಮತ್ತು ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ವಿರುದ್ಧ ಸ್ಪರ್ಧಿಸಿದ್ದ ದೇವರಾಜೇಗೌಡ, ಲೈಂಗಿಕ ಕಿರುಕುಳದ ವೀಡಿಯೊಗಳನ್ನು ಸೋರಿಕೆ ಮಾಡಿದ್ದಕ್ಕಾಗಿ ರಾಜ್ಯದ ಕಾಂಗ್ರೆಸ್ ನಾಯಕರನ್ನು ದೂಷಿಸಿದ್ದರು.