Webdunia - Bharat's app for daily news and videos

Install App

ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಮೇಲೆ ಪೊಲೀಸ್‌ ಹಲ್ಲೆ: ವಿಡಿಯೋ ಹಂಚಿಕೊಂಡ ಬಿವೈ ವಿಜಯೇಂದ್ರ

Sampriya
ಶನಿವಾರ, 15 ಮಾರ್ಚ್ 2025 (18:05 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ)  ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ
ಅವರ ಮೇಲೆ ಪಿಎಸ್​ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ.

ನಾಗರಿಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೋಲಿಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ.

ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ. ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

Pakistan ಉಗ್ರರಿಗೆ ಶುರುವಾಯ್ತು ಅಜ್ಞಾತ ಶೂಟರ್ ಭಯ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

ಮುಂದಿನ ಸುದ್ದಿ
Show comments