Publish Date: Thu, 25 Oct 2018 (09:45 IST)
Updated Date: Thu, 25 Oct 2018 (09:54 IST)
ಬೆಂಗಳೂರು : ದಂತ ವೈದ್ಯೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಪೇದೆಯೊಬ್ಬರನ್ನು ವಿಭಾಗದ ಡಿಸಿಪಿ ಅಣ್ಣಾಮಲೈ ಅಮಾನತು ಮಾಡಿದ್ದಾರೆ.
ಗಿರಿನಗರ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡುತ್ತಿರುವ ಸುದರ್ಶನ್ ಆಸ್ಕಿನ್ ಹಲ್ಲು ನೋವಿನ ವಿಚಾರವಾಗಿ ವೈದ್ಯಕೀಯ ಚಿಕಿತ್ಸೆಗಾಗಿ ವೈದ್ಯೆಯನ್ನು ಭೇಟಿಯಾಗಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದು ಅಸಭ್ಯವಾಗಿ ಮಾತನಾಡಲು ಶುರು ಮಾಡಿದ್ದನಂತೆ.
ಈ ಬಗ್ಗೆ ದಂತ ವೈದ್ಯೆ ಜ್ಞಾನ ಭಾರತೀ ಪೊಲೀಸ್ ಠಾಣೆಯಲ್ಲಿ ಪೇದೆಯ ವಿರುದ್ಧ ದೂರು ದಾಖಲಿಸಿದ್ದಾರೆ. ನಂತರ ಅಧಿಕಾರಿಗಳು ಆತನನ್ನು ಕರೆದು ಬುದ್ದಿ ಹೇಳಿ ಮುಚ್ಚಳಿಕೆ ಬರೆಸಿಕೊಂಡು ಕಳುಹಿಸಿದ್ದರೂ ಕೂಡ ತನ್ನ ಚಾಳಿಯನ್ನು ಬಿಡದಿದ್ದಾಗ ಜ್ಞಾನ ಭಾರತಿ ಠಾಣೆಯಲ್ಲಿ ಸೆಕ್ಷನ್ 354, 506ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುವಂತೆ ಡಿಸಿಪಿ ಅಣ್ಣಾಮಲೈ ಆದೇಶಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
pavithra
Publish Date: Thu, 25 Oct 2018 (09:45 IST)
Updated Date: Thu, 25 Oct 2018 (09:54 IST)