Publish Date: Thu, 10 Mar 2022 (16:12 IST)
Updated Date: Thu, 10 Mar 2022 (16:21 IST)
ಬಂದೋಬಸ್ತ್ನಲ್ಲಿದ್ದ ಪೊಲೀಸರ ಮೇಲೆ ಹೆಜ್ಜೇನು ದಾಳಿ ಮಾಡಿದ ಪ್ರಕರಣ ಸಂಬಂಧ ಇಬ್ಬರು ಪೊಲೀಸರಿಗೆ ಗಂಭೀರ ಗಾಯವಾಗಿದೆ. ಈ ಹಿನ್ನೆಲೆ ಐಸಿಯುನಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಫ್ರೀಡಂ ಪಾರ್ಕ್ನಲ್ಲಿ ಬಂದೋಬಸ್ತ್ಗಾಗಿ ಆಗಮಿಸಿದ್ದರು.
ಫ್ರೀಡಂ ಪಾರ್ಕ್ ಮುಂದಿದ್ದ ಮರದಲ್ಲಿ ಗೂಡು ಕಟ್ಟಿಕೊಂಡಿದ್ದ ಹೆಜ್ಜೇನು ಏಕಾಏಕಿ ಪೊಲೀಸರ ಮೇಲೆ ದಾಳಿ ಮಾಡಿದೆ. ಘಟನೆಯಲ್ಲಿ ಮಹಿಳಾ ಸಿಬ್ಬಂದಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಪೊಲೀಸರು ಗಾಯಗೊಂಡಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಜ್ಜೇನು ದಾಳಿಯಿಂದ ಇಬ್ಬರು ಪೊಲೀಸರು ಗಂಭೀರ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
geetha
Publish Date: Thu, 10 Mar 2022 (16:12 IST)
Updated Date: Thu, 10 Mar 2022 (16:21 IST)