Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೀದಿ ನಾಯಿ ಜಗಳ ಪೊಲೀಸ್ ಅಮಾನತು

ಬೀದಿ ನಾಯಿ ಜಗಳ ಪೊಲೀಸ್ ಅಮಾನತು
ಬೆಂಗಳೂರು , ಗುರುವಾರ, 23 ಡಿಸೆಂಬರ್ 2021 (14:10 IST)
ಬೀದಿ ನಾಯಿ ಜಗಳದಲ್ಲಿ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸೇವೆಯಿಂದ ವಜಾ ಆಗಿದ್ದಾರೆ. ಬೀದಿ ನಾಯಿಗಳಿಗೆ ಅನ್ನ ಹಾಕುವುದನ್ನು ಪ್ರಶ್ನಿಸಿ ಅವಾಚ್ಯ ಪದಗಳಿಂದ ನಿಂದನೆ ಮಾಡಿದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅಮೃತಹಳ್ಳಿ ಪೊಲೀಸ್ ಠಾಣೆ ಎಎಸ್‌ಐ ಚಂದ್ರಶೇಖರ್ ಅವರನ್ನು ಅಮಾನತು ಮಾಡಲಾಗಿದೆ.ಯಲಹಂಕ ನ್ಯೂಟೌನ್ ಪೊಲೀಸ್ ಕ್ವಾಟ್ರಸ್‌ನಲ್ಲಿರುವ ಬಿ.ಎಚ್. ಚಂದ್ರಶೇಖರ್ ಯಲಹಂಕ ನ್ಯೂ ಟೌನ್ ಸಮೀಪ ನಿಂತಿದ್ದರು. ಈ ವೇಳೆ ಮಹಿಳೆಯೊಬ್ಬಳು ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದರು. ಬೀದಿ ನಾಯಿಗಳಿಗೆ ಊಟ ಹಾಕುವುದನ್ನು ಪ್ರಶ್ನಿಸಿದ ಚಂದ್ರಶೇಖರ್ ಅವಾಚ್ಯ ಪದಗಳಿಂದ ಮಹಿಳೆಯನ್ನು ನಿಂದನೆ ಮಾಡಿದ್ದಾರೆ ಎನ್ನಲಾಗಿದೆ.
 
ಇದನ್ನು ಗಮನಿಸಿದ ಸಾರ್ವಜನಿಕರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲ ತಾಣದಲ್ಲಿ ಹರಿ ಬಿಟ್ಟಿದ್ದಾರೆ. ಇದೇ ವಿಚಾರವಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ದೂರನ್ನಾಧರಿಸಿ ಮುಖ್ಯ ಪೇದೆ ವಿರುದ್ಧ ಬೆದರಿಕೆ ಮಹಿಳೆ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆ ಮುಂದೆ ಮಾಡಬಾರದ್ದು ಮಾಡಿ ಸಿಕ್ಕಿಹಾಕಿಕೊಂಡ ಪೊಲೀಸ್