ಪೊಲೀಸರ ಮೇಲೆ ಯಾರೇ ಹಲ್ಲೆ ಮಾಡಿದ್ರೆ ಗುಂಡುಹಾರಿಸಿ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರ ಆತ್ಮರಕ್ಷಣೆಗಾಗಿ ಗನ್ ನೀಡಲಾಗುತ್ತದೆ. ಆರೋಪಿಗಳು ಹಲ್ಲೆ ಮಾಡಿದಾಗ ಗನ್ ಬಳಸಲು ಕಾನೂನಿನಲ್ಲಿ ಅವಕಾಶವಿದೆ. ಆತ್ಮರಕ್ಷಣೆಗಾಗಿ ಗನ್ ಬಳಸುವಂತೆ ಪೊಲೀಸರಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳು ನಿರಂತರವಾಗಿ ಪೊಲೀಸರ ಮೇಲೆ ಹಲ್ಲೆ, ದೌರ್ಜನ್ಯ ಎಸಗುತ್ತಿದ್ದಾರೆ. ಇಂತಹದನ್ನು ನೋಡಿ ಸರಕಾರ ಮೌನವಾಗಿರಲು ಸಾಧ್ಯವಿಲ್ಲ. ಕೂಡಲೇ ದುಷ್ಟ ಆರೋಪಿಗಳಿಗೆ ತಕ್ಕ ಪಾಠ ಕಲಿಸಿ ಎಂದು ಸಚಿವ ರೆಡ್ಡಿ ಖಡಕ್ ಆದೇಶ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ನಿರಂತರವಾಗಿ ಪೊಲೀಸರ ಮೇಲೆ ಆರೋಪಿಗಳು ನಿರ್ಭಯವಾಗಿ ಹಲ್ಲೆ ಮಾಡುತ್ತಿರುವ ಘಟನೆಗಳಿಂದ ಆಕ್ರೋಶಗೊಂಡಿರುವ ಸಚಿವ ರಾಮಲಿಂಗಾರೆಡ್ಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.