Publish Date: Sun, 21 Oct 2018 (15:52 IST)
Updated Date: Sun, 21 Oct 2018 (15:53 IST)
ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು.
ಚಾಮರಾಜನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮರಾದ ಪೋಲಿಸರಿಗೆ ಗೌರವ ಸಲ್ಲಿಸಲಾಯಿತು.
ಹುತಾತ್ಮರ ಸ್ಮಾರಕಕ್ಕೆ ಹೂಗುಚ್ಚವಿಟ್ಟು ನಮಿಸಿದ ಪೊಲೀಸರು, ಕುಶಾಲು ತೋಪು ಸಿಡಿಸಿ ಗೌರವ ನಮನ ಸಲ್ಲಿಸಿದರು.
ಇದೇ ವೇಳೆ ಕಪ್ಪು ಪಟ್ಟಿ ಧರಿಸಿ 2 ನಿಮಿಷ ಮೌನಾಚರಣೆ ಮಾಡಲಾಯಿತು. ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.